Gang Rape: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ. ಕೋಲ್ಕತ್ತಾದ ಡಮ್‌ಡಮ್ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಮೂವರು ಆರೋಪಿಗಳನ್ನು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನ ಮಾಡಿದ್ದಾರೆ.
7 ನೇ ತರಗತಿ ವಿದ್ಯಾರ್ಥಿನಿ ಶನಿವಾರ ಟ್ಯೂಷನ್ ಮುಗಿಸಿ ಮನೆಗೆ ಮರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬಾಲಕಿ ನೀಡಿದ ದೂರಿನ ಮೇರೆಗೆ ಮೂವರನ್ನು ಬಂಧನ ಮಾಡಲಾಗಿದೆ. ತನಿಖೆ ನಡೆಯುತ್ತಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಆರೋಪಿಗಳಲ್ಲಿ ಒಬ್ಬ ಆಕೆಯ ಪರಿಚಯಸ್ಥನಾಗಿದ್ದು, ಮೊದಲು ಪಾರ್ಕ್‌ಗೆ ಕರೆದೊಯ್ದಿದ್ದು, ಅಲ್ಲಿ ಇನ್ನಿಬ್ಬರು ಸೇರಿದ್ದಾರೆ. ನಂತರ ಆಕೆಯಲ್ಲಿ ಆಟೋದಲ್ಲಿ ಸ್ವಲ್ಪ ದೂರು ಕರೆದುಕೊಂಡು ಹೋಗಿ, ಪಾಳು ಬಿದ್ದ ಗುಡಿಸಲಿನಲ್ಲಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವಿಷಯ ಹೊರಗೆ ಹೇಳಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಕೂಡಾ ಹಾಕಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.
ಪೊಲೀಸರು ಬಂಧಿತರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಮುಂದುವರಿದಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆಂದು ಕಳುಹಿಸಲಾಗಿದೆ.
