Dharmasthala Case: ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಕುರಿತಂತೆ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಿಎನ್‌ಎಸ್‌ಎಸ್ 35(3) ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಿತ್ತು. ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಹಾಜರಾಗದಿದ್ದರೆ ಬಂಧನದ ಎಚ್ಚರಿಕೆ ನೀಡಿತ್ತು.
ಕಳೆದ ಒಂದು ತಿಂಗಳಿನಿಂದ ಮಹೇಶ್ ಶೆಟ್ಟಿ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್, ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.
ಇಂದು ನ.3 ರ ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ವಾರಂಟ್ ರಿಕಾಲ್ ಮಾಡಿದ್ದಾರೆ.
