Home » ದೆಹಲಿ ಕಾರು ಸ್ಫೋಟ: ರಾಜ್ಯದಲ್ಲೂ ಹೈ ಅಲರ್ಟ್‌ ಘೋಷಣೆ- ಸಿಎಂ

ದೆಹಲಿ ಕಾರು ಸ್ಫೋಟ: ರಾಜ್ಯದಲ್ಲೂ ಹೈ ಅಲರ್ಟ್‌ ಘೋಷಣೆ- ಸಿಎಂ

0 comments
CM Post

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಪೋಟದ ಘಟನೆಯಿಂದ ಮೃತಪಟ್ಟಿರುವವರ ಸುದ್ದಿ ನೋವಿನ ಜೊತೆ ದಿಗ್ಭ್ರಮೆ ಉಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಲಿ, ಗಾಯಾಳುಗಳು ಶೀಘ್ರ ಗುಣಮುಖರಾರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರಕಾರವು ದೆಹಲಿ ಸ್ಪೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್‌ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು

You may also like