Dharmendra : ಬಾಲಿವುಡ್ (Bollywood) ಹಿರಿಯ ನಟ ಧರ್ಮೇಂದ್ರ (Actor Dharmendra) 3 (Hospital) ದಾಖಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾರೆ. ಈ ನಡುವೆ ಅವರ ಸಾವಿನ ಕುರಿತ ಸುಳ್ಳು ಸುದ್ದಿ ವ್ಯಾಪಕವಾಗಿ ಹರಡಿದ್ದು, ಕುಟುಂಬದಿಂದ ಸ್ಪಷ್ಟನೆ ದೊರೆತಿದೆ.ಸದ್ಯ ಧರ್ಮೇಂದ್ರ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ನಿಧನದ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಧರ್ಮೇಂದ್ರ ಪತ್ನಿ ನಟಿ, ಸಂಸದೆ ಹೇಮಾಮಾಲಿನಿ ಟ್ವಿಟ್ ಮಾಡಿ ಬೇಸರ ಹೊರಹಾಕಿದ್ದಾರೆ.ಕಿಡಿಗೇಡಿಗಳ ವಿರುದ್ಧ ಹೇಮಾಮಾಲಿನಿ ಕಿಡಿಕಾರಿದ್ದಾರೆ. ಈ ರೀತಿ ಆಗುತ್ತಿರುವುದು ಕ್ಷಮೆಗೆ ಅರ್ಹವಾದುದಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್‌ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಗೆ ಸರಿಯಾದ ಗೌರವವನ್ನು ನೀಡಿ’ ಎಂದು ಹೇಮಾಮಾಲಿನಿ ಆಕ್ರೋಶದಿಂದ ಟ್ವಿಟ್ ಮಾಡಿದ್ದಾರೆ.
Dharmendra: ಧರ್ಮೇಂದ್ರ ನಿಧನದ ವದಂತಿ: ಕಿಡಿಕಾರಿದ ಹೇಮಮಾಲಿನಿ!
10
