6
Karnataka Gvt : ಉದ್ಯೋಗಸ್ಥ ಮಹಿಳೆಯರಿಗೆ ರಾಜ್ಯ ಸರ್ಕಾರವು ಪ್ರತಿಚಕ್ರದ ರಜೆಯನ್ನು ಮಂಜೂರು ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಹೌದು, ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಇದಕ್ಕೆ ಷರತ್ತುಗಳನ್ನು ಕೂಡ ಅನ್ವಯ ಮಾಡಿದೆ.
ಷರತ್ತುಗಳು
- ಆಯಾ ತಿಂಗಳ ರಜೆಯನ್ನು ಆಯಾ ತಿಂಗಳಲ್ಲೇ ಬಳಸಿಕೊಳ್ಳಬೇಕು
- ಒಂದು ತಿಂಗಳ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸುವಂತಿಲ್ಲ
- ಮುಟ್ಟಿನ ರಜೆ ಪಡೆಯಲು ವೈದ್ಯಕೀಯ ಪ್ರಮಾಣಪತ್ರ ನೀಡಬೇಕಿಲ್ಲ
- 52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಇಲ್ಲ
- ಸರ್ಕಾರಿ, ಬಹುರಾಷ್ಟ್ರೀಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೂ ಅನ್ವಯ
