6
Kumpala: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂಪಲ ಬಳಿ ಪತ್ತೆಯಾಗಿದೆ.ಮೃತಪಟ್ಟ ವ್ಯಕ್ತಿಯನ್ನು ದಯಾನಂದ (60) ಎಂದು ಗುರುತಿಸಲಾಗಿದೆ.ಕುಂಪಲ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ರಾಮ ಗಟ್ಟಿ ಎಂಬವರು ಮೃತಪಟ್ಟಿರುವುದು ಪತ್ತೆಯಾಗಿದೆ. ಬೆಳಗಿನ ಜಾವ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದಾಗ ನೋಡಿದ್ದಾರೆ ಎಂದು ತಿಳಿದುಬಂದಿದೆ.ದೇಹದಲ್ಲಿ ಗಾಯಗಳು ಪತ್ತೆ ಯಾಗಿದ್ದು, ಪ್ರಾಣಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳು ಸ್ಥಳದಲ್ಲಿದ್ದು, ಸಾವಿಗೆ ಕಾರಣವೇನೆಂದು ಪರಿಶೀಲನೆ ನಡೆಸುತ್ತಿದ್ದಾರೆ. ಎಫ್‌ಎಸ್‌ಎಲ್ ತಂಡವನ್ನು ನಿಯೋಜಿಸಲಾಗಿದ್ದು, ವಿಧಿವಿಜ್ಞಾನ ವೈದ್ಯರನ್ನು ಸಹ ಅಭಿಪ್ರಾಯ ನೀಡಲು ಕೋರಲಾಗಿದೆ ಎಂದು ತಿಳಿದುಬಂದಿದೆ.
