Mangalore: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಪಣಂಬೂರು ಸಿಗ್ನಲ್‌ನಲ್ಲಿ ವಾಹನಗಳು ನಿಂತಿತ್ತು ಎನ್ನಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೋ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ನಂತರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್‌ಗೆ ಅಪ್ಪಳಿಸಿದೆ ಎನ್ನಲಾಗಿದೆ.

ಈ ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
