Home » Dharmasthala : ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ!!

Dharmasthala : ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ!!

0 comments

Dharmasthala : ಧರ್ಮಸ್ಥಳದ ಸುತ್ತಮುತ್ತಲಿನ ಕಾಡಿನಲ್ಲಿ ನೂರಾರು ಶವಗಳನ್ನುಹುತಿಟ್ಟಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಗಾರರ ಆರೋಪ ಮಾಡಲಾಗಿತ್ತು. ಈ ಪ್ರಕರಣ ಇದೀಗ ತನಿಖೆಯ ಹಂತದಲ್ಲಿದೆ. ಇದರ ನಡುವೆ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ ನಡೆಸಲಾಗಿದೆ.

ಹೌದು ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದ ಪ್ರಕರಣದ ಕುರಿತಾಗಿ ಇದುವರೆಗೂ ಅನೇಕ ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು ಪಾದಯಾತ್ರೆ ನಡೆಸಿ ಧರ್ಮಸ್ಥಳದ ಪರ ತಮ್ಮ ಬಲ ಪ್ರದರ್ಶನ ಮಾಡಿದ್ದರು. ಇದೀಗ ಮುಸ್ಲಿಂ ಸಮುದಾಯದ ಅಭಿಮಾನಿಗಳು ಹಾಗೂ ಮುಸ್ಲಿಂ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ ನೇತೃತ್ವದ ತಂಡ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದ್ದಾರೆ.

ಸದ್ಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇವಸ್ಥಾನದಿಂದ ತನ್ವೀರ್​ಗೆ ಅದ್ದೂರಿ ಸ್ವಾಗತ ದೊರೆತಿದೆ. ಇಂದಿನ ಸರ್ವಧರ್ಮ ಸಮ್ಮೇಳನದಲ್ಲಿ ತನ್ವೀರ್ ಅಹಮ್ಮದ್ ಉಲ್ಲಾ ಪ್ರಮುಖ ಭಾಷಣ ಮಾಡಲಿದ್ದಾರೆ.

You may also like