5
Traffic Fine: ವಾಹನ ಸವಾರರಿಗೆ ರಾಜ್ಯ ಸರ್ಕಾರ (State Govt) ಗುಡ್‌ನ್ಯೂಸ್ ಕೊಟ್ಟಿದ್ದು, ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿ ಆದೇಶ ಹೊರಡಿಸಿದೆ.
ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ನ.21ರಿಂದ ಡಿ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಲು ರಿಯಾಯಿತಿ ಘೋಷಿಸಿದ್ದಾರೆ. ಆನ್‌ಲೈನ್ ಪೇಮೆಂಟ್‌ಗಳಾದ ಕೆಎಸ್‌ಪಿ, ಬಿಟಿಪಿ, ಬೆಂಗಳೂರು ಒನ್, ಕರ್ನಾಟಕ ಒನ್, ಟ್ರಾಫಿಕ್ ಪೊಲೀಸರ ಬಳಿಯೂ ತಮ್ಮ ದಂಡದ ರಿಯಾಯಿತಿ ಮೊತ್ತವನ್ನು ಜನ ಪಾವತಿಸಬಹುದು. ಡಿ.12ರ ಬಳಿಕ ಪೂರ್ಣ ಪ್ರಮಾಣದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಶೇ.50ರಷ್ಟು ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಹೊರಡಿಸುತ್ತಿರುವ 5ನೇ ಬಾರಿಯ ಆದೇಶ ಇದಾಗಿದೆ.
