Home » HD Kumaraswamy: ಮೈತ್ರಿ ವಿಚಾರ – ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕುಮಾರಸ್ವಾಮಿ

HD Kumaraswamy: ಮೈತ್ರಿ ವಿಚಾರ – ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕುಮಾರಸ್ವಾಮಿ

0 comments

HD Kumaraswamy : ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಚಡ್ಡಿದೋಸ್ತಿಯಾಗಿ ಮೆರೆಯುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ಬಳಿಕ ಹಲವಾರು ಸ್ಥಳೀಯ ಚುನಾವಣೆಗಳಲ್ಲಿಯೂ ಮೈತ್ರಿ ಮಾಡಿಕೊಂಡು ಗೆಲುವು ಸಾಧಿಸಿವೆ. ಆದರೆ ಈ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ ಅವರು ಶಾಕಿಂಗ್ ಹೇಳಿಕೆ ನೀಡಿದ ಎಲ್ಲಾ ಚುನಾವಣೆಗಳಲ್ಲೂ ಮೈತ್ರಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಹೌದು, ಕೋಲಾರದಲ್ಲಿ ಮಾತನಾಡಿದ ಅವರು, ಎಲ್ಲಾ ಚುನಾವಣೆಗಳಲ್ಲಿಯೂ ಮೈತ್ರಿ ಅಸಾಧ್ಯ. ಕೆಲವು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೈತ್ರಿ ಇರುವುದಿಲ್ಲ. ಲೋಕಸಭೆ, ವಿಧಾನಸಭೆ ಚುನಾವಣೆ ಬಂದಾಗ ಮಾತ್ರ ಮೈತ್ರಿ ಇರುತ್ತದೆ. ಎಲ್ಲಾ ಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಂದರೆ ಇದು ಮುಂದಿನ ಚುನಾವಣೆಗಳಲ್ಲಿ ಬಿಜೆಪಿಯೊಂದಿಗೆ ಎಲ್ಲಾ ಸಂದರ್ಭದಲ್ಲಿಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದಾಗಿ ಅವರು ಪರೋಕ್ಷವಾಗಿ ಹೇಳಿಕೆ ನೀಡಿದಂತಿದೆ.

You may also like