Home » Ayodhya Ram Mandir: ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ

Ayodhya Ram Mandir: ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ

0 comments

Ayodhya Ram Mandir: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇಂದು ಅಯೋಧ್ಯೆಯ ರಾಮಮಂದಿರದ (Ayodhya Ram Mandir) ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಐದು ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಿದ್ದಾರೆ.ಈ ಪ್ರಯುಕ್ತ ನಗರವನ್ನು ಅಲಂಕರಿಸಲಾಗಿದೆ, ರಸ್ತೆಗಳನ್ನು ಸ್ವಚ್ಛಗೊಳಿಸಲಾಗಿದೆ, ಹೊಸ ನಿಲ್ದಾಣ ಫಲಕಗಳನ್ನು ಸ್ಥಾಪಿಸಲಾಗಿದೆ, ನೈರ್ಮಲ್ಯ ತಂಡಗಳು ವ್ಯಾಪಕವಾದ ನಿರ್ವಹಣಾ ಕಾರ್ಯವನ್ನು ಕೈಗೊಂಡಿವೆ. ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಟ್ರಸ್ಟ್ ಸುಮಾರು 6,000 ಅತಿಥಿಗಳನ್ನು ಆಹ್ವಾನಿಸಿದೆ.

You may also like