Koppal: ಹತ್ತನೇ ತರಗತಿಯ (10th Class) ವಿದ್ಯಾರ್ಥಿನಿಯೊಬ್ಬಳು (Student) ಮಗುವಿಗೆ (Baby) ಜನ್ಮ ನೀಡಿದ ಅಚ್ಚರಿಯ ಘಟನೆ ಕೊಪ್ಪಳ (Koppal) ಜಿಲ್ಲೆಯ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಕುಕನೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.ಕುಕನೂರು ತಾಲೂಕಿನ ಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಗೆ ದಿಢೀರ್ ಹೊಟ್ಟೆನೋವು ಕಾಣಿಸಿಕೊಂಡಿದೆ.
ನೋವಿನಿಂದ ನರಳಾಡುತ್ತಿದ್ದ ವಿದ್ಯಾರ್ಥಿನಿಯನ್ನು ಕೂಡಲೇ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅಪ್ರಾಪ್ತ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ಇಡೀ ಜಿಲ್ಲೆಯನ್ನೇ ತಲೆ ತಗ್ಗಿಸುವಂತೆ ಮಾಡಿದೆ.ಇನ್ನು ಅಪ್ರಾಪ್ತಯು ಮಗುವಿಗೆ ಜನ್ಮ ನೀಡಿದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಅವರು ತಕ್ಷಣವೇ ಆಸ್ಪತ್ರೆಗೆ ದೌಡಾಯಿಸಿ, ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ.
