Home » DK Shivkumar : ಬಿಜೆಪಿ ಬಲದಿಂದಲೇ ಡಿಕೆ ಶಿವಕುಮಾರ್ ಮುಖ್ಯಮಂತ್ರಿ – ಖ್ಯಾತ ಸ್ವಾಮೀಜಿ ಸ್ಫೋಟಕ ಭವಿಷ್ಯ

DK Shivkumar : ಬಿಜೆಪಿ ಬಲದಿಂದಲೇ ಡಿಕೆ ಶಿವಕುಮಾರ್ ಮುಖ್ಯಮಂತ್ರಿ – ಖ್ಯಾತ ಸ್ವಾಮೀಜಿ ಸ್ಫೋಟಕ ಭವಿಷ್ಯ

0 comments
D k Shivkumar

D K Shivkumar : ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಮುಸುಕಿನ ಗುದ್ದಾಟ ಬಹಿರಂಗವಾಗುತ್ತಾ ಜೋರಾಗುತ್ತಿದೆ. ಡಿಕೆ ಶಿವಕುಮಾರ್ ಸಿಕ್ಕಸಿಕ್ಕ ದೇವಸ್ಥಾನಗಳಿಗೆ ತೆರಳಿ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಅವರು 50 ಶಾಸಕರೊಂದಿಗೆ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಕೂಡ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್ ಅವರು ಬಿಜೆಪಿ ಬೆಂಬಲದಿಂದಲೇ ಮುಖ್ಯಮಂತ್ರಿ ಆಗುವುದು ಎಂದು ಖ್ಯಾತ ಸ್ವಾಮೀಜಿ ಒಬ್ಬರು ಭವಿಷ್ಯ ನುಡಿದಿದ್ದಾರೆ.

ಕುಂದಗೋಳ ಪಟ್ಟಣದ ಹಿರೇಮಠದ ಶಿತಿಕಂಠೇಶ್ವರ ಸ್ವಾಮೀಜಿಯವರು ಡಿಕೆ ಶಿವಕುಮಾರ್ ಅವರ ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದು ‘ಕರ್ಮದಲ್ಲಿ ರವಿ ಮತ್ತು ಮಂಗಳ ಇರುವುದು ಹಾಗೂ ಭಾಗ್ಯದಲ್ಲಿ ಶುಕ್ರನಿರುವುದರಿಂದ ತಮ್ಮವರು (ಕಾಂಗ್ರೆಸ್) ಹಾಗೂ ಹೊರಗಿನ ಮಿತ್ರರ (ಬಿಜೆಪಿ- ಜೆಡಿಎಸ್) ಸಹಕಾರದಿಂದ ಡಿಸಿಎಂ ಡಿ.ಕೆ.ಶಿವಕುಮಾರ ಅವರು ಒಂದು ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಏರುತ್ತಾರೆ’ ಎಂದು ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಜ.15, 1961ರಂದು ಜನಿಸಿದ ಡಿಕೆಶಿಗೆ ಪ್ರಸ್ತುತ ಶನಿ ಮಹಾದಶಾ ಮತ್ತು ಶುಕ್ರ ಭುಕ್ತಿ ನಡೆಯುತ್ತಿದೆ. ಕುಂಡಲಿಯ ಪ್ರಕಾರ ಕರ್ಮದಲ್ಲಿ ಶನಿ ಇದ್ದು, ಶುಕ್ರ ತೃತಿಯಾಧಿಪತಿ ಉಚ್ಛರಾಶಿಯಲ್ಲಿ ಇರುವುದು ಹಾಗೂ ಭಾಗ್ಯದಲ್ಲಿ ಬುಧ ಮತ್ತು ಶುಕ್ರ ಕರ್ಮಸ್ಥಾನದಲ್ಲಿ ಇರುವುದು ಸಹಕಾರಿಯಾಗಲಿದೆ. ಸೂರ್ಯ ಮಂಗಳಕರ ಆಗಿರುವುದರಿಂದ ಅವರು ಮುಖ್ಯಮಂತ್ರಿಯಾಗುತ್ತಾರೆ. ​ಆದರೆ, ಅವರ ಕುಂಡಲಿಯಲ್ಲಿ ಗುರು ಕರ್ಕ ರಾಶಿಯಲ್ಲಿ ಶತ್ರು ಸ್ಥಾನದಲ್ಲಿ ಇರುವುದರಿಂದ ತಮ್ಮವರೇ ಇವರಿಗೆ ಶತ್ರುಗಳಾಗಿದ್ದಾರೆ ಎಂದು ವಿಶ್ಲೇಷಿಸಿದರು.

You may also like