Home » ಮಹೇಶ್‌ ಶೆಟ್ಟಿ ತಿಮರೋಡಿಗೆ ಗಡಿಪಾರು ನೋಟಿಸು: ಡಿ.8 ಕ್ಕೆ ವಿಚಾರಣೆ

ಮಹೇಶ್‌ ಶೆಟ್ಟಿ ತಿಮರೋಡಿಗೆ ಗಡಿಪಾರು ನೋಟಿಸು: ಡಿ.8 ಕ್ಕೆ ವಿಚಾರಣೆ

0 comments
Dharmasthala Soujanya

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್‌ ನಿರ್ದೇಶನದ ಅನುಸಾರ ಪುತ್ತೂರು ಉಪವಿಭಾಗಾಧಿಕಾರಿಗಳು ಮತ್ತೆ ಗಡಿಪಾರು ನೋಟಿಸ್‌ ಜಾರಿ ಮಾಡಿದ್ದಾರೆ.

ಈ ಹಿಂದೆ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ಸ್ಟೆಲ್ಲಾ ವರ್ಗೀಸ್‌ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನೆ ಮಾಡಿ ಮಹೇಶ್‌ ಶೆಟ್ಟಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಹಿಂದಿನ ಆದೇಶದಲ್ಲಿದ್ದ ಸೆಕ್ಷನ್‌ ದೋಷಗಳನ್ನು ಸರಿಪಡಿಸಿ ಹೊಸದಾಗಿ ನೋಟಿಸ್‌ ಜಾರಿ ಮಾಡುವಂತೆ ಪುತ್ತೂರು ಎಸಿಯವರಿಗೆ ನಿರ್ದೇಶನ ನೀಡಿತ್ತು.

ನ್ಯಾಯಾಲಯದ ನಿರ್ದೇಶನದ ಅನುಸಾರ ಎಸಿಯವರು ಮಹೇಶ್‌ ಶೆಟ್ಟಿ ಅವರಿಗೆ ಪರಿಷ್ಕೃತ ನೋಟಿಸ್‌ ಜಾರಿ ಮಾಡಿದ್ದು, ಡಿ.8 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

You may also like