Home » Yatindra: ‘ಡಿಕೆಶಿ CM ಮಾಡಿ ಅಂತ ಕೇಳಿದ್ರು, ಆದ್ರೆ ಹೈಕಮಾಂಡ್ ಸಮ್ಮತಿಸಿಲ್ಲ’- ಸತ್ಯ ಬಯಲು ಮಾಡಿದ ಯತೀಂದ್ರ ಸಿದ್ದರಾಮಯ್ಯ

Yatindra: ‘ಡಿಕೆಶಿ CM ಮಾಡಿ ಅಂತ ಕೇಳಿದ್ರು, ಆದ್ರೆ ಹೈಕಮಾಂಡ್ ಸಮ್ಮತಿಸಿಲ್ಲ’- ಸತ್ಯ ಬಯಲು ಮಾಡಿದ ಯತೀಂದ್ರ ಸಿದ್ದರಾಮಯ್ಯ

0 comments

Yatindra: ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರ ಸಾಕಷ್ಟು ಮಟ್ಟದಲ್ಲಿ ಸದ್ದು ಮಾಡಿದ್ದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ಬಳಿಕ ಬ್ರೇಕ್ ಫಾಸ್ಟ್ ಮಾಡುವುದರೊಂದಿಗೆ ಈ ಸಮಸ್ಯೆಯನ್ನು ಇಬ್ಬರು ಇತ್ಯರ್ಥಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಪತ್ರ ಯತೀಂದ್ರ ಅವರು ಶಾಕಿಂಗ್ ಹೇಳಿಕೆಯಿಂದನು ನೀಡಿದ್ದಾರೆ.

ಹೌದು, ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಆದರೆ ಈಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಪಕ್ಷದ ಹೈಕಮಾಂಡ್ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪುತ್ರ, ಕಾಂಗ್ರೆಸ್ ಎಂಎಲ್​ಸಿ ಯತೀಂದ್ರ (Yathindra Siddaramaiah) ಸಿದ್ದರಾಮಯ್ಯ ಹೇಳಿದ್ದಾರೆ.

ಅಲ್ಲದೆ ಸದ್ಯ ಸಿಎಂ ಬದಲಾವಣೆ ಆಗಲ್ಲ ಎಂದು ಹೈಕಮಾಂಡ್ ಹೇಳಿದೆ. ಇಷ್ಟೆಲ್ಲಾ ಖರ್ಚು ಮಾಡಿ ಜನರ ಸಮಸ್ಯೆಗಳನ್ನು ಚರ್ಚೆ ಮಾಡಲು ಅಧಿವೇಶನ ನಡೆಸಲಾಗುತ್ತಿದೆ. ಹಾಗಾಗಿ ವಿಪಕ್ಷ ನಾಯಕರು ರಾಜಕೀಯ ಬಿಟ್ಟು, ಉತ್ತರ ಕರ್ನಾಟಕದ ಜನರ ಬಗ್ಗೆ ಚರ್ಚೆ ಮಾಡಲಿ ಎಂದು ಹೇಳಿದರು.

You may also like