DK Shivkumar: ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರ ಸಾಕಷ್ಟು ಮಟ್ಟದಲ್ಲಿ ಸದ್ದು ಮಾಡಿದ್ದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ಬಳಿಕ ಬ್ರೇಕ್ ಫಾಸ್ಟ್ ಮಾಡುವುದರೊಂದಿಗೆ ಈ ಸಮಸ್ಯೆಯನ್ನು ಇಬ್ಬರು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಪಕ್ಷದ ಹೈಕಮಾಂಡ್ ಹೇಳಿದೆ ಎಂದು ಹೇಳಿದ್ದರು. ಇದಕ್ಕೆ ಈಗ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.
ಬೆಳಗಾವಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.
ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಸಂಬಂಧ ಮಾತನಾಡಿದ್ದು, ಸಿಎಂ – ಡಿಸಿಎಂ ಅವರೇ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಅಂತ ಹೇಳಿರುವಾವ ಬೇರೆಯವರ ಸ್ಟೇಟ್ಮೆಂಟ್ ಗೆ ಮಹತ್ವ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಒಂದು ಶಿಸ್ತು ಇದೆ. ಆ ಶಿಸ್ತಿನ ಪ್ರಕಾರವೇ ಹೋಗ್ತೀವಿ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿರ್ತೇವೆ ಎಂದು ಉತ್ತರ ನೀಡಿದ್ದಾರೆ.
