Karnataka: ರಾಜ್ಯ ಹಿರಿಯ ಐಪಿಎಸ್ ಅಧಿಕಾರಿಗಳಾದ ಅಲೋಕ್ ಕುಮಾರ್, ಬಿ ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಜತೆಗೆ ಮೂರು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಕೂಡಾ ಆಗಿದೆ. ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಿಸಲಾಗಿದೆ.ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ ದಯಾನಂದ್ ಅವರನ್ನು ಈಗ ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಇದಕ್ಕೂ ಮೊದಲು ಬಿ ದಯಾನಂದ್ ಅವರು ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದರು. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆಯಿಂದ ಅವರನ್ನು ಅಮಾನತು ಮಾಡಲಾಗಿತ್ತು. ಕೆಲ ದಿನಗಳ ಬಳಿಕ ಅಮಾನತು ರದ್ದು ಮಾಡಿ ಕಾರಾಗೃಹ ಇಲಾಖೆ ಎಡಿಜಿಪಿ ಹೊಣೆ ನೀಡಲಾಗಿತ್ತು.ಜವಳಿ ಅಭಿವೃದ್ಧಿ ಆಯುಕ್ತರಾಗಿದ್ದ ಜ್ಯೋತಿ ಕೆ. ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೂತನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹಿಂದೆ ಆಯೋಗದ ಕಾರ್ಯದರ್ಶಿಯಾಗಿದ್ದ (ಪ್ರಭಾರ) ಡಾ. ವಿಶಾಲ್ ಆರ್. ಅವರನ್ನು ಬಿಡುಗಡೆ ಮಾಡಲಾಗಿದೆ.ಡಾ. ವಿಶಾಲ್ ಆರ್. ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಅಲ್ಲದೆ, ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಾ. ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ
