KMF: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಎಂದು ದೊರೆತಿದ್ದುಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ(KMF) ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ವಿವಿಧ ಗ್ರೂಪ್ ಎ, ಬಿ, ಸಿ ಹುದ್ದೆಗಳ(Jobs) ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಬೇಕಾದ ಹುದ್ದೆಯ ಕುರಿತಾದ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಎಂಬಿತ್ಯಾದಿ ಕುರಿತಾದ ಮಾಹಿತಿ ಇಲ್ಲಿದೆ.
ಕೆಎಂಎಫ್ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಒಟ್ಟು 194 ಟೆಕ್ನಿಷಿಯನ್, ಕೆಮಿಸ್ಟ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲಿಸಬಹುದು. ಅಧಿಸೂಚನೆ ಪ್ರಕಾರ ಡಿಸೆಂಬರ್ 14, 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ)- 17
ಸಹಾಯಕ ವ್ಯವಸ್ಥಾಪಕರು (ಆಡಳಿತ) – 1
ಸಹಾಯಕ ವ್ಯವಸ್ಥಾಪಕರು (ಎಫ್ ಅಂಡ್ ಎಫ್) – 3
ಎಂಐಎಸ್/ ಸಿಸ್ಟಂ ಆಫೀಸರ್- 1
ಮಾರುಕಟ್ಟೆ ಅಧಿಕಾರಿ – 2
ತಾಂತ್ರಿಕ ಅಧಿಕಾರಿ – 18
ಕೆಮಿಸ್ಟ್ ದರ್ಜೆ -1- 21
ಆಡಳಿತ ಸಹಾಯಕ ದರ್ಜೆ – 17
ಲೆಕ್ಕ ಸಹಾಯಕ ದರ್ಜೆ 12
ಮಾರುಕಟ್ಟೆ ಸಹಾಯಕ ದರ್ಜೆ-2 – 10
ಕೆಮಿಸ್ಟ್ ದರ್ಜೆ-2 – 28
ಕಿರಿಯ ಸಿಸ್ಟಂ ಆಪರೇಟರ್ -13
ಶೀಘ್ರಲಿಪಿಗಾರರು ದರ್ಜೆ2 -1
ಕಿರಿಯ ತಾಂತ್ರಿಕರು – 50
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರವರ್ಗ-2ಎ, 2ಬಿ, 3ಎ, 3ಬಿ & ಒಬಿಸಿ ಅಭ್ಯರ್ಥಿಗಳಿಗೆ- 3 ವರ್ಷ ಹಾಗೂ
SC/ST ಅಭ್ಯರ್ಥಿಗಳಿಗೆ- 5 ವರ್ಷ ಮತ್ತು PWD/ ವಿಧವಾ ಅಭ್ಯರ್ಥಿಗಳಿಗೆ- 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಬಿಇ, ಎಂಬಿಎ, ಬಿಕಾಂ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ SC/ST/ಪ್ರವರ್ಗ-1 ಹಾಗೂ PWD ಅಭ್ಯರ್ಥಿಗಳು- 500 ರೂ. Arji ಶುಲ್ಕ ಹಾಗೂ ಉಳಿದ ಎಲ್ಲಾ ಅಭ್ಯರ್ಥಿಗಳು- 1,000 ರೂ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
