4
Mangalore: ಚಿಕಿತ್ಸೆಗೆಗಾಗಿ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾದೀನ ಕೈದಿಯೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಮೃತಪಟ್ಟ ಕೈದಿ ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಎಂದು ತಿಳಿದು ಬಂದಿದೆ.
ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣಾಧೀನ ಕೈದಿಯಾಗಿದ್ದ ಈತನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಗುರುವಾರ ನಗರದ ವೆನ್ಲಾಕ್ ಆಸ್ಪತ್ರೆಗೆ ಗಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತ ಪಟ್ಟಿದ್ದಾನೆ.ಈ ಕುರಿತು ಪಾಂಡೇಶ್ವರ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
