Home » BJP ಯಲ್ಲಿ ಅಚ್ಚರಿಯ ಬೆಳವಣಿಗೆ – ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ, ಯುವ ನಾಯಕ ಆಯ್ಕೆ

BJP ಯಲ್ಲಿ ಅಚ್ಚರಿಯ ಬೆಳವಣಿಗೆ – ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ, ಯುವ ನಾಯಕ ಆಯ್ಕೆ

0 comments

BJP: ಭಾರತೀಯ ಜನತಾ ಪಕ್ಷವು ಭಾನುವಾರ ಯುವ ನಾಯಕ ನಿತಿನ್ ನಬಿನ್(Nitin Nabin) ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ(new President) ನೇಮಿಸಿಕೊಂಡಿದೆ.

ಹೌದು, ಬಿಜೆಪಿ (BJP)ಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಮುನ್ನ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಯುವ ನಾಯಕ ನಿತಿನ್ ನಬಿನ್ ( Nitin Nabin) ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದು (ಡಿಸೆಂಬರ್ 14) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಈ ಮೂಲಕ ಕಾರ್ಯಧ್ಯಕ್ಷ ಸ್ಥಾನಕ್ಕೆ ಕಿರಿಯ ನಾಯಕನಿಗೆ ಮಣೆ ಹಾಕಿರುವುದು ಅಚ್ಚರಿ ಮೂಡಿಸಿದೆ.

ಬಿಹಾರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿರುವ ನಬಿನ್ ಅವರ ನೇಮಕ ತಕ್ಷಣವೇ ಜಾರಿಗೆ ಬಂದಿದೆ ಎಂದು ಪಕ್ಷ ತಿಳಿಸಿದೆ. ಅಧ್ಯಕ್ಷರ ಚುನಾವಣೆ ನಿಗದಿಯಾಗುವ ಮೊದಲು ಪಕ್ಷವು ಹೊಸ ಪೂರ್ಣಾವಧಿ ಅಧ್ಯಕ್ಷರನ್ನು ಘೋಷಿಸದ ಹೊರತು, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಚುನಾವಣೆಗೆ ಸಜ್ಜಾಗುತ್ತಿರುವಾಗ ಪಕ್ಷವನ್ನು ಮುನ್ನಡೆಸುವ ಕಾರ್ಯವನ್ನು ನಬಿನ್ ಹೊಂದಿರುತ್ತಾರೆ.

ನಿತಿನ್ ನಬಿ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಾಯಕ ನಿತಿನ್ ನಬಿಗೆ ಅಭಿನಂದನೆಗಳು. ಯುವ ನಾಯಕ ತನ್ನ ಕಠಿಣ ಪರಿಶ್ರಮದ ಮೂಲಕ ಪಕ್ಷದಲ್ಲಿ ಅಪಾರ ಅನುಭವ ಪಡೆದಿದ್ದಾರೆ. ಬಿಹಾರದಲ್ಲಿ ಶಾಸಕರಾಗಿ, ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಜನರ ಆಶೋತ್ತರಗಳು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.

You may also like