Nitin Nabin: ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರ ದಿಢೀರ್ ನೇಮಕವಾಗಿದೆ. 45 ವರ್ಷದ ನಿತಿನ್ ನವೀನ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಾರ್ಯಾಧ್ಯಕ್ಷರಾಗಿ ಇದಕ್ಕೂ ಮೊದಲು ನೇಮಕಗೊಂಡಿದ್ದರು. ಹೀಗಾಗಿ ನಿತಿನ್ ನಬಿನ್ ಅವರೇ ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಎನ್ನಲಾಗಿದೆ. ಹಾಗಾಗಿ ಮೊದಲಿಗೆ ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನಂತರ ನಡ್ಡಾ ಅವರ ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಕರ್ನಾಟಕ ಬಿಜೆಪಿಯಲ್ಲೂ ಸಹ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ ಎನ್ನಬಹುದು. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಗೆ ಹಾರಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ವಿಜಯೇಂದ್ರ ಮೊದಲೇ ಮುಂದಿನ ರಾಷ್ಟ್ರೀಯ ಅಧ್ಯಕ್ಷರೇ ಎಂದು ಹೇಳಲಾಗುತ್ತಿರುವ ಹಿನ್ನೆಲೆಯಲ್ಲಿ ನಿತಿನ್ ನಬಿನ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ.
