Home » ಮನೆ ಬಾವಿಗೆ ಬಿದ್ದು ದೈಹಿಕ ಶಿಕ್ಷಕ ಆತ್ಮಹತ್ಯೆ; ನರ ದೌರ್ಬಲ್ಯದಿಂದ ನೊಂದು ಸಾವು ಶಂಕೆ

ಮನೆ ಬಾವಿಗೆ ಬಿದ್ದು ದೈಹಿಕ ಶಿಕ್ಷಕ ಆತ್ಮಹತ್ಯೆ; ನರ ದೌರ್ಬಲ್ಯದಿಂದ ನೊಂದು ಸಾವು ಶಂಕೆ

0 comments

ಉಳ್ಳಾಲ: ನರಿಂಗಾನ ಗ್ರಾಮದ ಕಲ್ಲರಕೋಡಿ ಸರಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಪ್ರಭಾಕರ ಜೋಗಿ (51) ಎನ್ನುವವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ನರ ದೌರ್ಬಲ್ಯದ ಸಮಸ್ಯೆಯಿಂದ ಪ್ರಭಾಕರ ಜೋಗಿಯವರು ಬಳಲುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ಅವರು ಬಹಳ ಮಂಕಾಗಿದ್ದರು ಎನ್ನಲಾಗಿದೆ. ಆರೋಗ್ಯ ಸಮಸ್ಯೆಯೇ ಅವರ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಯುಡಿಆರ್‌ ಪ್ರಕರಣ ದಾಖಲು ಮಾಡಿದ್ದಾರೆ.

You may also like