T-20 World Cup : ಟಿ 20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಸೂರ್ಯ ಕುಮಾರ್ ಯಾದವ್ ತಂಡವನ್ನ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಶುಭಮನ್ ಗಿಲ್ ತಂಡದಿಂದ ಹೊರಗುಳಿದಿದ್ದಾರೆ.
ಟಿ20 ವಿಶ್ವಕಪ್ಗೆ ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲಿದೆ
