3
ಚಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಶಾಲೆ ಆರಂಭ ಮಾಡುವಂತೆ ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕೆ. ಆನಂದ್ ಆದೇಶ ಹೊರಡಿಸಿದ್ದಾರೆ.
ಮುಂದಿನ 10 ದಿನಗಳವರೆಗೆ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸದ್ದಾರೆ. ಜಿಲ್ಲೆಯ ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ತೀವ್ರ ಚಳಿಯಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿತ್ತು. ಹೀಗಾಗಿ ಶಾಲೆಗಳ ಸಮಯ ಬದಲಾವಣೆಗೆ ಆಗ್ರಹ ಕೇಳಿತ್ತು.
ಇದೀಗ ಡಿಸಿ ಶಾಲೆಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
