ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ನಡೆಯುತ್ತಿದೆ. ಆದರೆ ಅನ್ಯಧರ್ಮೀಯ ನಾಯಕರನ್ನು ಈ ಮಹೋತ್ಸವಕ್ಕೆ ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಎಂದು ವರದಿಯಾಗಿದೆ.
ಕ್ಷೇತ್ರ ಸಂರಕ್ಷಣಾ ವೇದಿಕೆ ಇಂದು ಈ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ಈ ಕೂಡಲೇ ವಾಪಸ್ ಪಡೆಯುವಂತೆ ಆಗ್ರಹ ಮಾಡಿದೆ.
ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿಯ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಜೋಕಿಮ್, ಮತ್ತು ಶಾರ್ಲೆಟ್ ಪಿಂಟೋ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ.
ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಅನ್ಯಧರ್ಮೀಯರಿಗೆ ಆಹ್ವಾನ ನೀಡುವುದೇಕೆ? ಎನ್ನುವುದು ಆಕ್ರೋಶಕ್ಕೆ ಕಾರಣ ಎನ್ನಲಾಗಿದೆ.
