12
online betting: ಆನ್ಲೈನ್ ಬೆಟ್ಟಿಂಗ್ ಆಪ್‌ನಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ ಒಂದು ಲಕ್ಷ ರೂಪಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಯೋರ್ವ ಸಾವಿಗೆ ಶರಣಾದ ದುರಂತ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಮೃತ ಯುವಕನನ್ನು 18 ವರ್ಷದ ವಿಕ್ರಮ್ ಎಂದು ಗುರುತಿಸಲಾಗಿದೆ. ವಿಕ್ರಂ ಸಂಗಾರೆಡ್ಡಿ ಜಿಲ್ಲೆಯ ಕಂದುಕೂರ್ ಪ್ರದೇಶದ ನಿವಾಸಿಯಾಗಿದ್ದ. ಕೀಟನಾಶಕ ಸೇವಿಸಿ ವಿಕ್ರಂ ಆತ್ಮ*ಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಕೂಡಲೇ ಗಮನಿಸಿದ ವಿಕ್ರಂನ ಕುಟುಂಬದವರು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
