8
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದ ನಂತರ, ರೌಡಿ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್.ಪುರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.
ತಮ್ಮ ವಿರುದ್ಧದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಅಸ್ಪಷ್ಟತೆಯಿಂದ ಕೂಡಿವೆ. ಕಸ್ಟೋಡಿಯಲ್ ವಿಚಾರಣೆಗೆ ಅಗತ್ಯವಿದ್ದೇವೆ ಎಂದು ಪ್ರತಿಪಾದಿಸುವ ಅಪರಾಧ ಕೃತ್ಯಗಳನ್ನು ಎಸಗಿಲ್ಲ. ರಾಜಕೀಯ ದ್ವೇಷದಿಂದ ತಮ್ಮನ್ನು ಬಂಧಿಸಿ ಕಿರುಕುಳ ನೀಡಲು ಸಿಐಡಿ ಪೊಲೀಸರು ಸರ್ವ ಪ್ರಯತ್ನ ನಡೆಸುತ್ತಿದ್ದಾರೆ. ಇದರಿಂದ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಶಾಸಕ ಬೈರತಿ ಬಸವರಾಜು ಅರ್ಜಿಯಲ್ಲಿ ಮನವಿ ಮಾಡಿದ್ದರು.
ಬೈರತಿ ಬಸವರಾಜ್ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದರು.
