Home » ಸರಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಈ ಸಭೆ ಕಡ್ಡಾಯ

ಸರಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಈ ಸಭೆ ಕಡ್ಡಾಯ

0 comments

ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು ಶಿಕ್ಷಕರ ಮಹಾಸಭೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜನವರಿ 3 ಮತ್ತು ಫೆಬ್ರವರಿ 28 ರಂದು ಪೇರೆಂಟ್‌ ಟೀಚರ್‌ ಮೀಟಿಂಗ್‌ ನಡೆಸಲು ವೇಳಾಪಟ್ಟಿ ಪ್ರಕಟ ಮಾಡಲಾಗಿದೆ. ಕಳೆದ ನವೆಂಬರ್‌ 14 ರಂದು ರಾಜ್ಯಾದ್ಯಂತ ಪಾಲಕರು ಮತ್ತು ಶಿಕ್ಷಕರ ಸಭೆ ನಡೆಸಲಾಗಿತ್ತು. ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಲು ಸೂಚಿಸಲಾಗಿತ್ತು. ಅಂತೆಯೇ ಸಭೆಯ ದಿನಾಂಕ ನಿಗದಿ ಮಾಡಿ ಸುತ್ತೋಲೆ ಹೊರಡಿಸಲಾಗಿದೆ.

ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಶಾಲೆಗಳಲ್ಲಿ ಮಹಾಸಭೆ ನಡೆಸಿದ ಮಾಹಿತಿ, ಹಾಜರಾದ ವಿದ್ಯಾರ್ಥಿಗಳು, ಆಹ್ವಾನಿಸಿದ ಪೋಷಕರು ಹಾಗೂ ಹಾಜರಾದ ಪೋಷಕರ ಸಂಖ್ಯೆಯ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ನವೆಂಬರ್‌ 14 ರ ಸಭೆಗೆ ನೀಡಲಾದ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

You may also like