5
ಚಿಕ್ಕೋಡಿ (ಬೆಳಗಾವಿ): ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ಅಜ್ಜನೇ ಅಪ್ರಾಪ್ತ ವಯಸ್ಸಿನ ಮೊಮ್ಮಗನಿಗೆ ಮದ್ಯ ಕುಡಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿ ಹಲವಾರು ಮಂದಿ ಮೆಸೇಜ್ ಪೋಸ್ಟ್ ಮಾಡಿದ್ದಾರೆ. ಇದರಿಂದ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆಗೆ ಪತ್ರ ಬರೆದಿದ್ದು, ರಾಯಬಾಗ ಅಬಕಾರಿ ಇಲಾಖೆ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
