13
ಮಂಗಳೂರು: ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ದಿಢೀರ್ ತಪಾಸಣೆ ಮಾಡಿದ್ದಾರೆ.
ತಪಾಸಣೆ ಸಂದರ್ಭದಲ್ಲಿ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್ ಜಪ್ತಿ ಮಾಜಿ ವಶಕ್ಕೆ ತೆಗೆದುಕೊಳ್ಳಲಾಗಿರುವ ಕುರಿತು ವರದಿಯಾಗಿದೆ. ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ಇವುಗಳನ್ನು ನೀಡಿ ಪ್ರಕರಣ ದಾಖಲು ಮಾಡಲಾಗಿರುತ್ತದೆ.
