Home » ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ

ಶಾಲೆಗಳಲ್ಲಿ ದಿನಪತ್ರಿಕೆ ಓದುವ ಆದೇಶ ಅನುಷ್ಠಾನಗೊಳಿಸಿ

0 comments

ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಿತ್ಯ ದಿನಪತ್ರಿಕೆ ಓದುವ ಆದೇಶವನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಲ್ಲಿ ಮನವಿ ಮಾಡಿದೆ.

ಈ ಬಗ್ಗೆ ಮುಖ್ಯ ಪತ್ರ ಬರೆದಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ, “ಉತ್ತರಪ್ರದೇಶ ಸರಕಾರ ನಿತ್ಯ ಶಾಲೆಗಳಲ್ಲಿ ಮಕ್ಕಳು ದಿನಪತ್ರಿಕೆ ಓದುವ ಬಗ್ಗೆ ಆದೇಶ ಹೊರಡಿಸಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಈ ನಡುವೆ, ”ಇಂಟರ್ನೆಟ್ ಶಿಕ್ಷಣ, ಮನರಂಜನೆ ಹಾಗೂ ಸಾಮಾಜಿಕ ಜಾಲತಾಣಗಳಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಕೊರತೆ, ಶ್ರವಣದೋಷ, ದೈಹಿಕ ಚಟುವಟಿಕೆಗಳಲ್ಲಿ ಆಸಕ್ತಿ ಇಲ್ಲದ ಲಕ್ಷಣಗಳು ಕಂಡು ಬರುತ್ತಿವೆ,” ಎಂದು ಆಯೋಗ ಕಳವಳ ವ್ಯಕ್ತಪಡಿಸಿದೆ. ‘ಮಕ್ಕಳು 10 ರಿಂದ 15 ನಿಮಿಷ ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಕಾರಿಯಾಗುತ್ತದೆ. ಅಲ್ಲದೆ, ಪ್ರಚಲಿತ ವಿದ್ಯಮಾನಗಳ ಜತೆಗೆ ಸಾಮಾನ್ಯ ಜ್ಞಾನ ವೃದ್ಧಿಗೂ ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನಿತ ರಹಿತ ಶಾಲೆಗಳಲ್ಲಿ ನಿತ್ಯ ದಿನಪತ್ರಿಕೆ ಓದುವ ಕುರಿತು ಆದೇಶ ಜಾರಿ ಮಾಡಬೇಕು,’ ಎಂದು ಆಯೋಗ ಮನವಿ ಮಾಡಿದೆ.

You may also like