Home » ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು

ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು

0 comments
Mangaluru Bengaluru Trains

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ವಂದೇ ಭಾರತ್‌ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚರಿಸಲಿದೆ. ಕರಾವಳಿ ಪ್ರದೇಶಗಳ ಪುಣ್ಯಕ್ಷೇತ್ರಕ್ಕೆ ಹೋಗುವವರಿಗೆ ಇದು ಸಿಹಿ ಸುದ್ದಿ.

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಯೋಜನೆಗೆ ಚಾಲನೆ ನೀಡಲಾಗುವುದು. ಈಗಾಗಲೇ ಈ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ. ಅದಷ್ಟು ಬೇಗ ಈ ರೈಲು ಸಂಚಾರ ಮಾಡಲಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಅವರು ಎಕ್ಸ್​​ನಲ್ಲಿ ಪೋಸ್ಟ್​​​ ಮಾಡಿದ್ದಾರೆ.

ಸಾಮಾನ್ಯ ರೈಲುಗಳು ಈ ಮಾರ್ಗವನ್ನು ಕ್ರಮಿಸು 9 ರಿಂದ 10 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ವಂದೇ ಭಾರತ್‌ ರೈಲು ಕೇವಲ 5 ಗಂಟೆಗಳವರೆಗೆ ಕಡಿಮೆ ಮಾಡಬಹುದು ಎಂದು ವರದಿಯಾಗಿದೆ.

ಬೆಂಗಳೂರು, ತುಮಕೂರು, ಹಾಸನ ಮತ್ತು ಮಂಗಳೂರು ಎಂಬ ನಾಲ್ಕು ಜಿಲ್ಲೆಗಳಿಗೆ ಇದು ಅನುಕೂಲವಾಗಲಿದೆ. ಇದಕ್ಕೆ 50,000 ಕೋಟಿ ರೂ. ಬಜೆಟ್ ನೀಡಲಾಗಿದೆ

You may also like