15
Bantwala: ಮನೆ ಮಹಡಿಯ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬಂಟ್ವಾಳದ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತಪಟ್ಟ ವ್ಯಕ್ತಿ.
ಬಾರ್ ನಲ್ಲಿ ಸಪ್ಲೆಯರ್ ಆಗಿದ್ದ ಪ್ರವೀಣ್ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು.ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಅದಾಗಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
