16
2025-26 0 ಪೂರ್ವಸಿದ್ಧತಾ ಪರೀಕ್ಷೆ-1 ಜ.5 ರಿಂದ 10ರವರೆಗೆ ನಡೆಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.
ಈ ಕುರಿತು ಈಗಾಗಲೇ ವೇಳಾಪಟ್ಟಿ ಪ್ರಕಟಿಸಿರುವ ಮಂಡಳಿ, ಮುಖ್ಯ ಪರೀಕ್ಷೆ ಮಾದರಿಯಂತೆಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ಸಂಬಂಧಿಸಿದ ಪ್ರೌಢಶಾಲಾ ಮುಖ್ಯ ಶಿಕ್ಷಕರು ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿದೆ.
ಪರೀಕ್ಷೆಗಳು ನಡೆದ ಮರುದಿನ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಕಲಿಕೆಯ ಫಲಿತಾಂಶವನ್ನು ವಿದ್ಯಾರ್ಥಿ ಹಾಗೂ ಪೋಷಕರ ಗಮನಕ್ಕೆ ತರಲು ಮಂಡಳಿ ಸೂಚಿಸಿದೆ. ಇನ್ನು ಆಯಾ ದಿನದ ಎಲ್ಲಾ ವಿಷಯದ ಪ್ರಶ್ನೆಪತ್ರಿಕೆಗಳ ಗೌಪ್ಯತೆ ಕಾಪಾಡಿಕೊಂಡು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಮುದ್ರಿಸಿಕೊಳ್ಳುವಂತೆ ಮಂಡಳಿ ಸೂಚನೆ ನೀಡಿದೆ
