Home » Modi: ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

Modi: ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

0 comments

Modi: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ (Adichunchanagiri) ಭೇಟಿ ನೀಡಲಿದ್ದಾರೆ.ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ.

ಬಳಿಕ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಚುಂಚನಗಿರಿ ಶ್ರೀಗಳು ಮೋದಿ ಪ್ರವಾಸದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

You may also like