Home » Indore: ಕಲುಷಿತ ನೀರು ಸೇವನೆಯಿಂದ ಸಾವಿನ ಸಂಖ್ಯೆ 14ಕ್ಕೆ ಏರಿಕೆ: 200 ಮಂದಿ ಆಸ್ಪತ್ರೆಗೆ ದಾಖಲು

Indore: ಕಲುಷಿತ ನೀರು ಸೇವನೆಯಿಂದ ಸಾವಿನ ಸಂಖ್ಯೆ 14ಕ್ಕೆ ಏರಿಕೆ: 200 ಮಂದಿ ಆಸ್ಪತ್ರೆಗೆ ದಾಖಲು

0 comments

Indore: ಇಂದೋರ್‌ನ (Indore) ಭಾಗೀರಥಪುರದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 200 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 1,400ಕ್ಕೂ ಅಧಿಕ ಜನರು ವಾಂತಿ, ಭೇದಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕಳೆದ 8 ವರ್ಷಗಳಿಂದ ಇಂದೋರ್ ಭಾರತದ ಅತ್ಯಂತ ಸ್ವಚ್ಛ ನಗರವೆಂದು ಖ್ಯಾತಿ ಪಡೆದಿದೆ. ಈಗ ಅದೇ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಜನ ಸಾವನ್ನಪ್ಪುತ್ತಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಯೋಗಾಲಯದಲ್ಲಿ ನೀರಿನ ಪರೀಕ್ಷೆ ನಡೆದಿದ್ದು, ಕಲುಷಿತ ನೀರಿನಿಂದಾಗಿ ಜನರು ಅಸ್ವಸ್ಥರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಂದೋರ್‌ನ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಮಾಧವ ಪ್ರಸಾದ್ ಹಸಾನಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಭಾಗೀರಥಪುರದಲ್ಲಿ ಪೈಪ್‌ಲೈನ್ ಸೋರಿಕೆಯಿಂದಾಗಿ ಕುಡಿಯುವ ನೀರು ಕಲುಷಿತಗೊಂಡಿರುವುದು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ ಎಂದು ಹೇಳಿದ್ದಾರೆ.ಗುರುವಾರದಿಂದ (ಜ.1) ಮನೆಗಳಿಗೆ ಪೈಪ್‌ಲೈನ್ ಮೂಲಕ ಶುದ್ಧ ನೀರನ್ನು ಸರಬರಾಜು ಮಾಡಲಾಗಿದೆ. ಆದರೂ ಕೂಡ ಜನರಿಗೆ ನೀರನ್ನು ಕುದಿಸಿ, ನಂತರ ಕುಡಿಯಬೇಕು ಎಂದು ಸೂಚನೆ ನೀಡಿದ್ದಾರೆ.

You may also like