14
CET: 2026ರ ಸಿಇಟಿ ಪರೀಕ್ಷೆಯ (CET Exam) ದಿನಾಂಕ ಘೋಷಣೆಯಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority) ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಿಗಧಿಪಡಿಸಿ ಆದೇಶ ಹೊರಡಿಸಿದೆ.
ಯಸ್, ಕರ್ನಾಟಕದ ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (Common Entrance Exam) ಮುಹೂರ್ತ ಫಿಕ್ಸ್ ಮಾಡಲಾಗಿದೆ. ಏಪ್ರಿಲ್ 23ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 24ರಂದು ಗಣಿತ ಹಾಗೂ ಜೀವಶಾಸ್ತ್ರ ಪರೀಕ್ಷೆಯನ್ನ ನಡೆಯಲಿದೆ ಎಂದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ (MC Sudhakar) ಮಾಹಿತಿ ನೀಡಿದ್ದಾರೆ.
