9
ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ತಲೆದಂಡವಾಗಿದೆ. ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಒಂದೇ ದಿನಕ್ಕೆ ಎಸ್ಪಿ ಪವನ್ ನೆಜ್ಜೂರ್ ಅಮಾನತು ಆಗಿದ್ದಾರೆ.
ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ಒಂದು ದಿನದ ಕೆಳಗೆ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಅನ್ನೋದು ಅದರ ಹಿಂದಿನ ಕಾರಣ. ವಿಜಯನಗರ ಲೋಕಾಯುಕ್ತದಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಕಳೆದ ಡಿಸೆಂಬರ್ 31 ರಂದು ಬಳ್ಳಾರಿ ಎಸ್ ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.
