Home » ಜೋಳದ ಚಿಗುರು ತಿಂದು ಕ್ಷಣಮಾತ್ರದಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವು

ಜೋಳದ ಚಿಗುರು ತಿಂದು ಕ್ಷಣಮಾತ್ರದಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವು

0 comments

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ತಿಂದ ಪರಿಣಾಮ 50 ಕ್ಕೂ ಹೆಚ್ಚು ಕುರಿ ಮರಿಗಳು ಸಾವಿಗೀಡಾದ ದುರ್ಘಟನೆ ನಡೆದಿದೆ.

ಒಟ್ಟು 200 ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ 50 ಕುರಿ ಮರಿಗಳು ಸಾವಿಗೀಡಾಗಿದೆ. ಎಂದಿನಂತೆ ಹುಲ್ಲು ಮೇಯುತ್ತಿದ್ದ ಕುರಿಗಳು ಏಕಾಏಕಿ ಕುಸಿದು ಬೀಳುವುದನ್ನು ನೋಡಿದಾಗ, ಕೆಲವೇ ಕ್ಷಣದಲ್ಲಿ 50 ಕ್ಕೂ ಹೆಚ್ಚು ಕುರಿಗಳು ಸಾವಿಗೀಡಾದಿದೆ. ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಕುರಿಗಾಹಿ ಬೇಸರ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿದು ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆಯ ಸಮಯದಲ್ಲಿ ಕುರಿಗಳು ಜೋಳದ ಚಿಗುರು ಸಿಪ್ಪೆ ಸೇವನೆ ಮಾಡಿರುವುದು ತಿಳಿದು ಬಂದಿದೆ. ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್‌ ಅಂಶ ಇರುವುದರಿಂದ ಅದು ವಿಷವಾಗಿ ಪರಿಣಮಿಸಿ ಕುರಿಗಳ ಸಾವಿಗೆ ಕಾರಣವಾಗಿದೆ ಎಂದು ವೈದ್ಯಾಧಿಕಾರಿ ಅರ್ಕೆರಪ್ಪ ಎಂದು ತಿಳಿಸಿದ್ದಾರೆ.

You may also like