27
Kukke: ಕನ್ನಡ, ತೆಲುಗು,ತುಳು ಭಾಷೆಗಳಲ್ಲಿ ನಟಿಸಿರುವ ಖ್ಯಾತ ಹಿರಿಯ ಚಲನಚಿತ್ರ ನಟ ಸುಮನ್ ತಲ್ವಾರ್ ಪತ್ನಿ ಸಿರಿಶ ಹಾಗೂ ಮಗಳು ಅತೀಶ್ವರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು.ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮತ್ತು ಪಂಚಾಮೃತ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ಶ್ರೀ ದೇವಳದ ಆಡಳಿತ ಕಚೇರಿಗೆ ಆಗಮಿಸಿದ ಸುಮಂತ್ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ ಇಂಜಾಡಿ ಶಾಲು ಹೊದಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಸತೀಶ ಕೂಜುಗೋಡು,ದೇವಳದ ಸಹಾಯಕ ಕಾರ್ಯ ನಿರ್ವಹಣಾ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ್ ರಾವ್ ಹಾಗೂ ಮಾಧವ ಪದೇಲ ಅವರು ಹಾಜರಿದ್ದರು.
