37
Budget: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಜ.7 ರಂದು ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಮುಖ ದಿನಾಂಕಗಳನ್ನು ಅನುಮೋದಿಸಿದೆ.
ಸಂಸದೀಯ ಕ್ಯಾಲೆಂಡರ್ ಪ್ರಕಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಭಾನುವಾರದಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅವರು ಸತತ ಎಂಟನೇ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಜನವರಿ 28 ರಂದು ಭಾಷಣ ಮಾಡಲಿದ್ದು, ಬಜೆಟ್ ಅಧಿವೇಶನ ಆರಂಭವಾಗಲಿದೆ. ಜನವರಿ 29 ರಂದು ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು.
