50
Belthangady: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಮುಂಬಯಿಯಲ್ಲಿರುವ ಅಣ್ಣ ಬಾಂಡ್ @ ಶ್ರೀನಾಥ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳದ ಪವನ್ ಕುಮಾರ್ ಎಂಬವರ ದೂರಿನ ಮೇರೆ ಜ.8ರಂದು BNS 296 ಅಡಿಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣ ಬಾಂಡ್ @ ಶ್ರೀನಾಥ್ ಶೆಟ್ಟಿ ವಿರುದ್ಧ ಈ ಹಿಂದೆ ಹಲವು ಪ್ರಕರಣ ದಾಖಲಾಗಿದೆ.
