Home » ಚಾರ್ಮಾಡಿ: ಮೆಕ್ಕಿಜೋಳ ಕೊಂಡೊಯ್ಯುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ

ಚಾರ್ಮಾಡಿ: ಮೆಕ್ಕಿಜೋಳ ಕೊಂಡೊಯ್ಯುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ

0 comments

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಜ.10 (ಇಂದು) ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮೆಕ್ಕೆಜೋಳ ಲೋಡ್‌ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಭಾರೀ ಅನಾಹುತ ಸಂಭವಿಸಿದೆ.

ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಲಾರಿಯ ಟಯರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ನಂತರ ಇಡೀ ಲಾರಿಗೆ ಹಬ್ಬಿ ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟುನಹೋಗಿದೆ. ಬೆಂಕಿಯ ತೀವ್ರತೆಗೆ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿತ್ತು. ಈ ಘಟನೆಯಲ್ಲಿ ಲಾರಿಯಲ್ಲಿದ್ದ ಚಾಲಕ ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕೆಲಸ ನಡೆಸಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

You may also like