52
ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಚಳಿ ಜತೆಗೆ ಕೆಲವೆಡ ತುಂತುರು ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ದಾವಣಗೆರೆ, ಹಾವೇರಿ, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ತೀವ್ರ ಚಳಿಯ ಜತೆಗೆ ತುಂತುರು ಮಳೆಯಾಗಲಿದೆ. ಜ.10 ಹಾಗೂ 11 ರಂದು ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ರಾಮನಗರ ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಚಳಿ ಪ್ರಮಾಣ ಮತ್ತೆ ಜಾಸ್ತಿಯಾಗಿದ್ದು, ಶುಕ್ರವಾರ ಬೆಳಗ್ಗೆ 15 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ
