ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ತಾಮ್ರ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿರುವ ಕುರಿತು ವರದಿಯಾಗಿದೆ.
ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್‌ನಿಂದ ತಾಮ್ರದ ಹೊದಿಕೆ ಕಳವು ಮಾಡಲಾಗಿತ್ತು. ಮಂಗಳೂರು ಮೂಲದ ಆರಿಫ್ (37), ಅಬ್ದುಲ್ ಹಮೀದ್ (32) ಬಂಧಿತರು.
ಥೀಮ್ ಪಾರ್ಕ್‌ನ ಕಟ್ಟಡದ ಮೇಲ್ಛಾವಣಿಗೆ ಹಾಕಿದ್ದ ತಾಮ್ರದ ಹೊದಿಕೆ ಕಳವು ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಮೂರು ತಂಡಗಳನ್ನು ರಚಿಸಿ ತನಿಖೆ ಮಾಡಿದ್ದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೋಧ ಕಾರ್ಯವನ್ನು ಪೊಲೀಸರು ಮಾಡಿದ್ದರು.
ಬಂಧಿತರಿಂದ 45,000 ರೂ ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ ಜಪ್ತಿ ಮಾಡಲಾಗಿದೆ. ಎರಡು ಸೀಲಿಂಗ್ ಫ್ಯಾನ್ ಮತ್ತು ಕೃತ್ಯಕ್ಕೆ ಬಳಕೆ ಮಾಡಿದ ಗೂಡ್ಸ್ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಕಾರ್ಕಳ ಪೊಲೀಸರು ತನಿಖೆ ನಡೆಸಿದ್ದಾರೆ.
