38
Karnataka State Budget: ಮುಂಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ (Karnataka Budget 2026) ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್ 6ರಂದು ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್ 5 ರಿಂದ ಬಜೆಟ್ ಅಧಿವೇಶನ ಶುರುವಾಗುವ ಸಾಧ್ಯತೆ ಇದೆ. ಅಂದು ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಮಾರ್ಚ್ 6 ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಸಿದ್ದರಾಮಯ್ಯ 16ನೇ ಬಜೆಟ್‌ಗಳನ್ನ ಈಗಾಗಲೇ ಮಂಡಿಸಿದ್ದು, ಮಾರ್ಚ್ 6ರಂದು ಮಂಡಿಸುವ ಬಜೆಟ್ 17ನೇ ಬಜೆಟ್ ಆಗಲಿದೆ.
