Home » Gadaga: ಚಿನ್ನದ ನಿಧಿ ಸಿಕ್ಕ ಕುಟುಂಬಕ್ಕೆ ಈಗ ಆತಂಕ !!

Gadaga: ಚಿನ್ನದ ನಿಧಿ ಸಿಕ್ಕ ಕುಟುಂಬಕ್ಕೆ ಈಗ ಆತಂಕ !!

0 comments

Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಆದರೆ ಇದೀಗ ಸರ್ಕಾರಕ್ಕೆ ನಿಧಿ ಒಪ್ಪಿಸಿದ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ.

 

ಹೌದು,  ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿತ್ತು. ಗಂಗವ್ವ ರಿತ್ತಿ ಕುಟುಂಬ ತಮ್ಮ ಸ್ವ – ಇ ಚ್ಛೆ ಯಿಂದ ಸರ್ಕಾರಕ್ಕೆ ನಿಧಿಯನ್ನ ನೀಡಲು ನಿರ್ಧರಿಸಿದ್ದರು. ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ.

 

ನಿಧಿ ಸಿಕ್ಕಿದ ಸ್ಥಳವನ್ನು ನಿಷಿದ್ಧ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದ್ದು, ಎಲ್ಲಿ ಬದುಕು ಸಾಗಿಸಬೇಕು ಎಂಬ ಚಿಂತೆಯಲ್ಲಿದೆ. ಮನೆಯ ಯಜಮಾನ ಮೃತಪಟ್ಟಿದ್ದು, ಕುಟುಂಬದಲ್ಲಿ ತಾಯಿ ಮತ್ತು ಚಿಕ್ಕ ಮಗನಿದ್ದಾನೆ. ಈ ಬಡ ಕುಟುಂಬಕ್ಕೆ ಈಗ ಆಸರೆ ಇಲ್ಲದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯ ಸದಸ್ಯರು ಮತ್ತು ಗ್ರಾಮಸ್ಥರು ಒಗ್ಗಟ್ಟಾಗಿ ನಿಂತು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸರ್ಕಾರ ಮಾನವೀಯ ದೃಷ್ಟಿಯಿಂದ ಕುಟುಂಬಕ್ಕೆ ಒಂದು ನಿವೇಶನ ಅಥವಾ ಮನೆಯನ್ನು ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಕುಟುಂಬದವರು ಚಿನ್ನದ ಆಸೆಯನ್ನು ಬಿಟ್ಟು, ನಮಗೆ ಮನೆ ಬೇಕು ಎಂದು ಕಣ್ಣೀರು ಹಾಕುತ್ತಿದ್ದಾರೆ. ಗ್ರಾಮಸ್ಥರು ಕೂಡ ಕುಟುಂಬಸ್ಥರಿಗೆ ಬೆಂಬಲ ಸೂಚಿಸಿದ್ದಾರೆ.

You may also like