Home » BJP ಯ ನೂತನ ರಾಷ್ಟ್ರಾಧ್ಯಕ್ಷರಾಗಿ ಜ. 20ಕ್ಕೆ ನಿತಿನ್ ನಬಿನ್ ಪ್ರಮಾಣವಚನ ಸ್ವೀಕಾರ!!

BJP ಯ ನೂತನ ರಾಷ್ಟ್ರಾಧ್ಯಕ್ಷರಾಗಿ ಜ. 20ಕ್ಕೆ ನಿತಿನ್ ನಬಿನ್ ಪ್ರಮಾಣವಚನ ಸ್ವೀಕಾರ!!

0 comments

BJPಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಮುನ್ನ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಯುವ ನಾಯಕ ನಿತಿನ್ ನಬಿನ್ ( Nitin Nabin) ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಈಗ ಅವರು ಜ. 20 ರಂದು ಪಕ್ಷದ ಪೂರ್ಣ ಪ್ರಮಾಣದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಹೌದು, ಭಾರತೀಯ ಜನತಾ ಪಕ್ಷದಲ್ಲಿ ಮಹತ್ವದ ನಾಯಕತ್ವ ಬದಲಾವಣೆ ನಡೆಯಲಿದ್ದು, ಪಕ್ಷದ ಕಾರ್ಯಕಾರಿ ಅಧ್ಯಕ್ಷರಾಗಿರುವ ನಿತಿನ್ ನಬಿನ್ ಜನವರಿ 20ರಂದು ಬಿಜೆಪಿಯ ಪೂರ್ಣಾವಧಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಭವಿಷ್ಯದಲ್ಲಿ ಯುವ ನಾಯಕರಿಗೆ ಮಹತ್ವದ ಜವಾಬ್ದಾರಿ ನೀಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಈ ಹುದ್ದೆಯನ್ನು ನೀಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ. ಬಿಜೆಪಿಯೊಳಗೆ ನಬಿನ್‌ ಜೊತೆ ನಿಕಟವಾಗಿ ಕೆಲಸ ಮಾಡಿದವರು ಅವರನ್ನು ಕಠಿಣ ಪರಿಶ್ರಮಿ, ರಾಜಕೀಯವಾಗಿ ಕುತೂಹಲಿ ಎಂದು ಬಣ್ಣಿಸಿದ್ದಾರೆ.

ಸಧ್ಯ ನಿತಿನ್ ನಬೀನ್ ಅವರು ಬಿಹಾರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ. ಮುಂದಿನ ತಿಂಗಳು ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ನತಿನ್‌ ಅಲಂಕರಿಸುವವರಿದ್ದಾರೆ ಎನ್ನಲಾಗುತ್ತಿದ್ದು, ಅದಕ್ಕೂ ಮೊದಲು ಈ ಬದಲಾವಣೆಯಾಗುವ ನಿರೀಕ್ಷೆಯಿದೆ. ಇದಕ್ಕೂ ಮೊದಲು ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜ್ಯಸಭೆಗೆ ಹೋಗಲಿದ್ದಾರೆ. ಈ ಮೂಲಕ, ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿರುವವರು ರಾಜ್ಯಸಭಾ ಸದಸ್ಯರೂ ಆಗಿರುವ ಸಂಪ್ರದಾಯವನ್ನು ಮುಂದುವರೆಸಲಿದ್ದಾರೆ ಎನ್ನಲಾಗಿದೆ.

You may also like