7
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಫೋಟೊವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಹಾಗೂ ಮಹಿಳಾ ಐಎಎಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರುವಂತಹ ಸುದ್ದಿ ಪ್ರಸಾರ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳ ತನಿಖೆಗಾಗಿ ಪೊಲೀಸ್ ಮಹಾನಿರ್ದೇಶಕ ಬಿ. ಶಿವಧರ್ ರೆಡ್ಡಿ ಅವರು ಹೈದರಾಬಾದ್ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನರ್ ನೇತೃತ್ವದಲ್ಲಿ ಎಂಟು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.
ಈ ಸಂಬಂಧ ಒಟ್ಟು ಒಂಬತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ದೂರು ದಾಖಲಾಗಿದೆ. ತ್ವರಿತವಾಗಿ ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸುವಂತೆ ಎಸ್‌ಐಟಿಗೆ ಪೊಲೀಸ್ ಮಹಾನಿರ್ದೇಶಕರು ನಿರ್ದೇಶನ ನೀಡಿದ್ದಾರೆ.
