Home » Rahul Gandhi : ಅಯೋಧ್ಯೆ ರಾಮ ಮಂದಿರಕ್ಕೆ ರಾಹುಲ್ ಗಾಂಧಿ ಭೇಟಿ – ಬಿಜೆಪಿ ಲೇವಡಿ

Rahul Gandhi : ಅಯೋಧ್ಯೆ ರಾಮ ಮಂದಿರಕ್ಕೆ ರಾಹುಲ್ ಗಾಂಧಿ ಭೇಟಿ – ಬಿಜೆಪಿ ಲೇವಡಿ

0 comments

 

Rahul Gandhi : ಕಾಂಗ್ರೆಸ್ ನಾಯಕ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸದ್ಯದಲ್ಲೇ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಗಳು ತಿಳಿಸಿ. ಇದರ ಬೆನ್ನಲ್ಲೇ ಈ ಕುರಿತಾಗಿ ಬಿಜೆಪಿ ಲೇವಡಿ ಮಾಡಿದೆ

ಹೌದು, ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದ 32 ಸದಸ್ಯರ ಸಂಸದೀಯ ಸಮಿತಿಯು ಇದೇ ಜನವರಿ 23ರಂದು ಅಯೋಧ್ಯೆಗೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಕೂಡ ಅಯೋಧ್ಯೆಯ( Ayodhya ) ರಾಮಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂಬ ಸುದ್ದಿಯು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. 

ಕಾಂಗ್ರೆಸ್ ಸಂಸದ ತನುಜ್ ಪುನಿಯಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, “ದೇವಾಲಯದ ನಿರ್ಮಾಣ ಕಾರ್ಯ ಅಪೂರ್ಣವಾಗಿದ್ದರಿಂದ ರಾಹುಲ್ ಗಾಂಧಿ ಅವರು ಈ ಹಿಂದೆ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಹೋಗಿರಲಿಲ್ಲ. ಈಗ ದೇವಾಲಯದ ಶಿಖರ ಮತ್ತು ಧ್ವಜ ಸ್ಥಾಪನೆಯಾಗಿ ಪೂಜೆಗಳು ಆರಂಭವಾಗಿರುವುದರಿಂದ, ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಭೇಟಿ ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಅಯೋಧ್ಯೆಗೆ ಹೋಗದವರು ಈಗ ಚುನಾವಣೆ ಅಥವಾ ರಾಜಕೀಯ ಲಾಭಕ್ಕಾಗಿ ಹೋಗುತ್ತಿದ್ದಾರೆ. ಫೋಟೋ ಮತ್ತು ಪ್ರಚಾರಕ್ಕಾಗಿ ಮಾಡುತ್ತಿರುವ ರಾಜಕೀಯ ಗಿಮಿಕ್ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

You may also like